text
stringlengths 0
2.67k
|
---|
ಪುನೀತ್ ರಾಜಕುಮಾರ್ ೧೯೭೫–೨೦೨೧ ೨೦೨೨ ಸಿನಿಮಾ ಹಾಗೂ ಸಾಮಾಜಿಕ ಸೇವೆ [೭] |
ಉಲ್ಲೇಖಗಳು |
ಬದಲಾಯಿಸಿ |
"ಸರ್ಕಾರ]] ದಿಂದ ಜವರೆ ಗೌಡ ಅವರಿಗೆ ಕರ್ನಾಟಕ ರತ್ನ, ವೀರೇಂದ್ರ ಹೆಗ್ಗಡೆ". Archived from the original on 2010-01-31. Retrieved 2012-03-11. |
ವಿಕಿಪೀಡಿಯ |
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. |
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್‌ಟಾಪ್ |
ವಿಕಿಪೀಡಿಯ |
ವಿಕಿಪೀಡಿಯ ಅನ್ನು ಹುಡುಕಿ |
[ಮರೆಮಾಡಲು] |
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ. |
ಕುವೆಂಪು |
ರಸ ಋಷಿ, ಭಾರತೀಯ ಕವಿ, ನಾಟಕಕಾರ, ಚಿಂತಕ |
ಭಾಷೆ |
Download PDF |
ವೀಕ್ಷಿಸಿ |
ಮೂಲವನ್ನು ನೋಡು |
ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪[೧] - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. |
ಕುವೆಂಪು |
ಜನನ |
ಡಿಸೆಂಬರ್ ೨೯, ೧೯೦೪ |
ಹಿರೇಕೊಡಿಗೆ, ಕೊಪ್ಪ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ |
ಮರಣ |
ನವೆಂಬರ್ 11, 1994 |
ಮೈಸೂರು, ಕರ್ನಾಟಕ, ಭಾರತ |
ಅಂತ್ಯ ಸಂಸ್ಕಾರ ಸ್ಥಳ |
ಕುಪ್ಪಳಿ, ಶಿವಮೊಗ್ಗ ಜಿಲ್ಲೆ |
ಕಾವ್ಯನಾಮ |
ಕುವೆಂಪು |
ವೃತ್ತಿ |
ಕವಿ, ಲೇಖಕ, ಪ್ರಾಧ್ಯಾಪಕ, ಪ್ರಾಂಶುಪಾಲ, ಕುಲಪತಿ |
ರಾಷ್ಟ್ರೀಯತೆ |
ಭಾರತೀಯ |
ಅಭ್ಯಾಸ ಮಾಡಿದ ವಿದ್ಯಾ ಸಂಸ್ಥೆ |
ಮೈಸೂರು ವಿಶ್ವವಿದ್ಯಾನಿಲಯ |
ಕಾಲ |
20ನೆಯ ಶತಮಾನ |
ಪ್ರಕಾರ/ಶೈಲಿ |
ಸಣ್ಣಕತೆ, ಕವಿತೆ, ಕಾದಂಬರಿ, ನಾಟಕ, ವಿಮರ್ಶೆ, ಆತ್ಮಕಥೆ, ಜೀವನ ಚರಿತ್ರೆ, ಮಹಾಕಾವ್ಯ |
ವಿಷಯ |
ನುಡಿ, ನಾಡೊಲವು, ಪ್ರಕೃತಿ, ಅಧ್ಯಾತ್ಮ, ವಿಚಾರ |
ಸಾಹಿತ್ಯ ಚಳುವಳಿ |
ನವೋದಯ |
ಪ್ರಮುಖ ಪ್ರಶಸ್ತಿ(ಗಳು) |
ಜ್ಞಾನಪೀಠ ಪ್ರಶಸ್ತಿ, ಪದ್ಮ ವಿಭೂಷಣ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿ, ಪಂಪ ಪ್ರಶಸ್ತಿ |
ಬಾಳ ಸಂಗಾತಿ |
ಹೇಮಾವತಿ |
ಮಕ್ಕಳು |
ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ, ತಾರಿಣಿ |
ಸಂಬಂಧಿಗಳು |
ಚಿದಾನಂದ ಗೌಡ |
ಪ್ರಭಾವಗಳು |
ಪ್ರಭಾವಿತರು |
ಸಹಿ |
www.kuvempu.com |
ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ 'ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು. |
ಪರಿವಿಡಿ |
ಜೀವನ |
ಬಾಲ್ಯ |
ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ ೨೯, ೧೯೦೪ ರಲ್ಲಿ ಜನಿಸಿದರು.[೨] ತಂದೆ ವೆಂಕಟಪ್ಪ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು. |
ಶಿಕ್ಷಣ |
ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು.[೩] ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ. ಎ. ಪದವಿಯನ್ನೂ ಪಡೆದರು. ಟಿ. ಎಸ್. ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು. |
ವೃತ್ತಿಜೀವನ |
ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ಪ್ರಾಂಶುಪಾಲರೂ ಆಗಿದ್ದರು. ನಂತರ ಉಪಕುಲಪತಿಗಳಾದರು[೪]. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು. |
ವೈವಾಹಿಕ ಜೀವನ |
'ಉದಯರವಿ', ಒಂಟಿಕೊಪ್ಪಲ್, ಮೈಸೂರು |
ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ. |
ನಿಧನ |
ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ. |
ಸಾಹಿತ್ಯ ಕೃಷಿ |
ಕುವೆಂಪು ಅವರು 20ನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ಅವರೊಬ್ಬ ರಸಋಷಿ. ತಮ್ಮ ಮೇರು ಕೃತಿ 'ಶ್ರೀ ರಾಮಾಯಣ ದರ್ಶನಂ'ನಲ್ಲಿ ಈ ಕಾಲಕ್ಕೆ ಅಗತ್ಯವಾದ ದರ್ಶನವನ್ನು ನೀಡಿದ್ದಾರೆ. ಅವರ ಎರಡು ಬೃಹತ್ ಕಾದಂಬರಿಗಳಾದ 'ಕಾನೂರು ಹೆಗ್ಗಡತಿ' ಹಾಗೂ 'ಮಲೆಗಳಲ್ಲಿ ಮದುಮಗಳು' ಅವರನ್ನು ಜಗತ್ತಿನ ಮಹಾನ್ ಕಾದಂಬರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿವೆ. ಅವರ ನಾಟಕಗಳಿಗೆ ವೈಚಾರಿಕತೆಯ ಸ್ಪರ್ಶವಿದೆ.[೫] |
ಕೃತಿಗಳು |
ಮಹಾಕಾವ್ಯ |
ಶ್ರೀ ರಾಮಾಯಣ ದರ್ಶನಂ (1949) |
ಖಂಡಕಾವ್ಯಗಳು |
ಚಿತ್ರಾಂಗದಾ (1936) |
ಕವನ ಸಂಕಲನಗಳು |
ಕೊಳಲು (1930) |
ಪಾಂಚಜನ್ಯ (1933) |
ನವಿಲು (1934) |
ಕಲಾಸುಂದರಿ (1934) |
ಕಥನ ಕವನಗಳು (1937) |
ಕೋಗಿಲೆ ಮತ್ತು ಸೋವಿಯಟ್ ರಷ್ಯಾ (1944) |
ಪ್ರೇಮ ಕಾಶ್ಮೀರ (1946) |
ಅಗ್ನಿಹಂಸ (1946) |
Subsets and Splits
No saved queries yet
Save your SQL queries to embed, download, and access them later. Queries will appear here once saved.