text
stringlengths
0
2.67k
ಯೋಗ ಕಲಾ ರತ್ನ
ರತ್ನ ದೀಪ
ರಸಿಕರ ರಾಜ
ರಾಜಕೀರ್ತಿ ಮೆರೆದ ಗಂಡುಗಲಿ
ಲೋಕ ಪೂಜಿತ
ವರ ನಟ
ವಿನಯ ಶೀಲ
ವಿಶ್ವ ಮಾನವ
ವಿಶ್ವ ಶಾಂತಿ ಪ್ರಿಯ
ವೀರಾಧಿ ವೀರ
ಶತಮಾನದ ಯುಗ ಪುರುಷ
ಶುದ್ಧ ಮನಸ್ಸಿನ ಹಿಮಶಿಖರ
ಸಂಗೀತ ರತ್ನ
ಸಮಾಜ ಭೂಷಣ
ಸರಸ್ವತಿ ಪುತ್ರ
ಸರಳತೆಯ ಸಂತ
ಸರಳತೆಯ ಸಾಕಾರಮೂರ್ತಿ
ಸೋಲಿಲ್ಲದ ಸರದಾರ
ಡಾ. ರಾಜ್‌ಕುಮಾರ್ ರಸ್ತೆ
ಬದಲಾಯಿಸಿ
ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ, ಯಶವಂತಪುರ ಮೇಲ್ಸೇತುವೆಯಿಂದ ಪ್ರಸನ್ನ ಚಿತ್ರಮಂದಿರದವರೆಗೆ ರಾಜಾಜಿನಗರದ ಮೂಲಕ ಹಾದುಹೋಗುವ ಮುಖ್ಯರಸ್ತೆಗೆ ಡಾ. ರಾಜ್‌ಕುಮಾರ್ ರಸ್ತೆ ಎಂದು ಹೆಸರಿಸಲಾಗಿದೆ.
ಗೂಗಲ್‌ ಡೂಡಲ್‌ ಗೌರವ
ಬದಲಾಯಿಸಿ
ಗೂಗಲ್‌ ಸರ್ಚ್‌‌ನ ಡೂಡಲ್‌ ವಿಭಾಗದವರು ಡಾ. ರಾಜ್‌ಕುಮಾರ್‌ ಅವರ ೮೮ನೇ ಹುಟ್ಟು ಹಬ್ಬದ ದಿನ ( ೨೪ ಏಪ್ರಿಲ್‌ ೨೦೧೭ ) ರಾಜ್‌ ಅವರ ಡೂಡಲ್‌ ಪ್ರದರ್ಶಿಸುವ ಮೂಲಕ ಗೌರವ ಸಲ್ಲಿಸಿದರು. ಈ ಡೂಡಲ್‌ ದೇಶಾದ್ಯಂತ ( google.co.in ) ಎಲ್ಲಾ ರಾಜ್ಯಗಳಲ್ಲೂ ಪ್ರದರ್ಶಿತಗೊಂಡು ಪರ ರಾಜ್ಯದವರಿಗೂ ರಾಜ್‌ ಅವರ ಬಗ್ಗೆ ಕುತೂಹಲ ಮೂಡುವಂತೆ ಮಾಡಿತು. ತೆಂಕಣ ಭಾರತದ ನಟರಿಗೆ ಗೂಗಲ್‌ ಈ ರೀತಿಯ ಗೌರವ ಸಲ್ಲಿಸಿರುವುದು ಇದೇ ಮೊದಲು. ಇದಕ್ಕಾಗಿ ಕನ್ನಡಿಗರು ಗೂಗಲ್‌ನವರಿಗೂ ಅಭಿನಂದನೆ ಸಲ್ಲಿಸಿದರು.
ಪುಸ್ತಕಗಳು
ಬದಲಾಯಿಸಿ
ಕನ್ನಡ ರಂಗಭೂಮಿ ಮತ್ತು ಸಿನೆಮಾಕ್ಕೆ ಡಾ. ರಾಜ್ ಕೊಡುಗೆ (ಪಿ.ಹೆಚ್.ಡಿ ನಿಬಂಧ)
ಬದಲಾಯಿಸಿ
ಬೆಂಗಳೂರಿನ ಬಸವನಗುಡಿಯಲ್ಲಿರುವ ವಿಜಯ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾದ ಡಿ. ಗುರುಮೂರ್ತಿ ಹಾರೋಹಳ್ಳಿ ಅವರು "ಕನ್ನಡ ರಂಗಭೂಮಿ ಮತ್ತು ಸಿನೆಮಾಕ್ಕೆ ಡಾ. ರಾಜ್ ಕೊಡುಗೆ" ಕುರಿತ ಸಂಶೋಧನಾತ್ಮಕ ಪ್ರಬಂಧ ಮಂಡಿಸಿ, ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಈ ಸಂಶೋಧನೆಯ ಸಮಯದಲ್ಲಿ, ಡಾ. ರಾಜ್ ಅವರನ್ನು ಹಲವಾರು ಬಾರಿ ಸಂದರ್ಶಿಸಿದ್ದಾರೆ.
೧೯೯೭ರಲ್ಲಿ ಪ್ರಾರಂಭಿಸಿದ ಸಂಶೋಧನೆಯನ್ನು ನಾಲ್ಕುವರ್ಷಗಳ ಕಾಲ ಡಾ. ಮಳಲಿ ವಸಂತಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಸಿದ ಗುರುಮೂರ್ತಿ ೨೦೦೧ರಲ್ಲಿ ಪಿ.ಹೆಚ್.ಡಿ ಪದವಿ ಪಡೆದರು.
ಪ್ರಾಣಪದಕ
ಬದಲಾಯಿಸಿ
ಪ್ರಾಣಪದಕ ಡಾ. ರಾಜಕುಮಾರ್ ಅವರನ್ನು ಕುರಿತ 2013ರ ಅಕ್ಟೋಬರ್ ತಿಂಗಳಿನಲ್ಲಿ ಅ. ನಾ. ಪ್ರಹ್ಲಾದರಾವ್ ಬರೆದ ಸ್ವಾರಸ್ಯಕರ ಸಂಗತಿಗಳ ಮತ್ತೊಂದು ಪುಸ್ತಕ. ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ನೆನಪಿನಾಳದಲ್ಲಿನ ಡಾ. ರಾಜಕುಮಾರ್ ಸಂಗತಿಗಳನ್ನು ಅನಾವರಣಗೊಳಿಸುವ, ವಸಂತ ಪ್ರಕಾಶನ ಪ್ರಕಾಶನಗೊಳಿಸಿರುವ ಅ. ನಾ. ಪ್ರಹ್ಲಾದರಾವ್ ಬರೆದ ವಿಶಿಷ್ಟ ಪುಸ್ತಕ 'ಪ್ರಾಣಪದಕ'. ಸುಮಾರು 120 ಪುಟಗಳ ಈ ಪುಸ್ತಕದ ಲೇಖನಗಳು `ಮಂಗಳ` ವಾರಪತ್ರಿಕೆಯಲ್ಲಿ ಪ್ರಕಟಿಗೊಂಡಿದ್ದವು.
ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಅವರು ಬೇರೆ ಬೇರೆ ಸಂದರ್ಭಗಳಲ್ಲಿ ಲೇಖಕ ರೊಂದಿಗೆ ಹಲವು ವಿಷಯ ಗಳನ್ನು ನೆನಪು ಮಾಡಿಕೊಂಡರು. 'ಪ್ರಾಣಪದಕ' ಹೆಸರಿನಲ್ಲಿ 'ಮಂಗಳ' ವಾರಪತ್ರಿಕೆ ಈ ಲೇಖನಗಳನ್ನು ಪ್ರಕಟಿಸಿತ್ತು.
ಬಂಗಾರದ ಮನುಷ್ಯ
ಬದಲಾಯಿಸಿ
ಕನ್ನಡದ ವರನಟ ಡಾ. ರಾಜಕುಮಾರ್ ಅವರ ಜೀವನ ಹಾಗೂ ಸಾಧನೆ ಕುರಿತು ಕರ್ನಾಟಕ ಸರ್ಕಾರಕ್ಕಾಗಿ ಅ. ನಾ. ಪ್ರಹ್ಲಾದರಾವ್ ಬರೆದ ಬಂಗಾರದ ಮನುಷ್ಯ ಅತ್ಯಂತ ಜನಪ್ರಿಯ ಪುಸ್ತಕ.
ಈ ಪುಸ್ತಕ ಇಂಗ್ಲಿಷ್ ಭಾಷೆಗೆ `ಡಾ. ರಾಜಕುಮಾರ್ ಇನ್ಮಿಟಬಲ್ ಆಕ್ಟರ್ ವಿಥ್ ಗೋಲ್ಡನ್ ವಾಯ್ಸ್` ಹೆಸರಿನಲ್ಲಿ ಭಾಷಾಂತರಗೊಂಡು ಅಮೆರಿಕದ ನ್ಯೂಜೆರ್ಸಿ ನಗರದಲ್ಲಿ ಬಿಡುಗಡೆಗೊಂಡಿತು.[೧೧] ಕನ್ನಡದ ನಟರೊಬ್ಬರನ್ನು ಕುರಿತ ಇಂಗ್ಲಿಷ್ ಪುಸ್ತಕವೊಂದು ಭಾರತದ ಹೊರಗಡೆ ಬಿಡುಗಡೆಗೊಂಡ ಮೊದಲ ಪುಸ್ತಕ ಇದೆಂಬ ದಾಖಲೆಯನ್ನೂ ಮಾಡಿತು. ಕನ್ನಡ ಪುಸ್ತಕ ಬಿಡುಗಡೆ ಗೊಂಡ ಸಂದರ್ಭದಲ್ಲಿ ಡಾ. ರಾಜಕುಮಾರ್ ಹಾಗೂ ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಅವರು ತಮ್ಮ ಮನೆಗೆ ಲೇಖಕರ ಕುಟುಂಬವನ್ನು ಬರಮಾಡಿಕೊಂಡು ಆತಿಥ್ಯ ನೀಡಿದ್ದರು.
೨೨೦ ಪುಟಗಳ ಈ ಪುಸ್ತಕ ಡಾ. ರಾಜಕುಮಾರ್ ಅವರಿಂದಲೇ ಪ್ರಶಂಸೆಗೆ ಒಳಗಾಯಿತು.
ಇದು ಡಾ. ರಾಜಕುಮಾರ್ ಅವರನ್ನು ಕುರಿತಾದ ಮೊದಲ ಇಂಗ್ಲಿಷ್ ಪುಸ್ತಕವೇ ಅಲ್ಲದೆ, ದೇಶದ ಹೊರಗಡೆ ಬಿಡುಗಡೆ ಆದ ಡಾ. ರಾಜಕುಮಾರ್ ಕುರಿತಾದ ಮೊದಲ ಪುಸ್ತಕವೂ ಹೌದು. ಈ ಪುಸ್ತಕದಲ್ಲಿ ಡಾ. ರಾಜಕುಮಾರ್ ಚಲನಚಿತ್ರಗಳ ಬಗ್ಗೆ ವಿವರಗಳಷ್ಟೆ ಅಲ್ಲದೆ, ಅವರ ಸಾಮಾಜಿಕ ಬದುಕು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಯ ವಿವರಗಳನ್ನು ದಾಖಲಿಸಲಾಗಿದೆ.
ಕನ್ನಡ ಪುಸ್ತಕ ೨೦೦೬ರಲ್ಲಿ ಅಮೆರಿಕದ ವಾಷಿಂಗ್ಟನ್ ನಗರದಲ್ಲಿ ನಡೆದ ಅಕ್ಕ ಸಮ್ಮೇಳನ, ೨೦೦೬ರಲ್ಲಿ ಕುವ್ಯೆತ್ ಕನ್ನಡ ಸಮ್ಮೇಳನದಲ್ಲಿ ಬಿಡುಗಡೆಗೊಂಡಿತು. ಇಂಗ್ಲಿಷ್ ಪುಸ್ತಕ ಬೆಂಗಳೂರಿನಲ್ಲಿ ಶ್ರೀಮತಿ ಪಾವ೯ತಮ್ಮ ರಾಜಕುಮಾರ್ ಅವರಿಂದ ಬಿಡುಗಡೆಗೊಂಡಿತಲ್ಲದೆ, ಲಂಡನ್ ನಗರದಲ್ಲಿ ೨೦೦೮ರ ಆಗಸ್ಟ್ ತಿಂಗಳಿನಲ್ಲಿ ನಡೆದ ಕನ್ನಡ ಸಮ್ಮೇಳನದಲ್ಲಿ ಅಲ್ಲಿನ ಸೆನೆಟರ್ ಬಿಡುಗಡೆ ಮಾಡಿದರು.
ಇತರೆ ವಿಕಿಮೀಡಿಯ ಯೋಜನೆಗಳಲ್ಲಿ ಡಾ. ರಾಜ್‌ಕುಮಾರ್
ಬದಲಾಯಿಸಿ
ಕನ್ನಡ ವಿಕಿಸೊರ್ಸನಲ್ಲಿ ಡಾ. ರಾಜ್‌ಕುಮಾರ ಗಾಯನ
ಹೊರಗಿನ ಸಂಪರ್ಕಗಳು
ಬದಲಾಯಿಸಿ
Rajkumar ಸಂಬಂಧಿತ ಮೀಡಿಯಾ ವಿಕಿಮೀಡಿಯ ಕಾಮನ್ಸ್‌ನಲ್ಲಿ ಲಭ್ಯವಿದೆ.
ರಾಜ್‌ಕುಮಾರ್ ಐ ಎಮ್ ಡಿ ಬಿನಲ್ಲಿ
ದಟ್ಸ ಕನ್ನಡ.ಕಾಂ - ಡಾ. ರಾಜ್ ಲೇಖನಗಳ ಸಂಗ್ರಹ Archived 2006-04-09 ವೇಬ್ಯಾಕ್ ಮೆಷಿನ್ ನಲ್ಲಿ.
ವಿಶ್ವಕನ್ನಡ.ಕಾಂ - ಡಾ. ರಾಜ್ ವಿಶೇಷ ಪರಿಚಯ (ಕೃಪೆ:"ಕನ್ನಡ ಸಿನಿಮಾ ಇತಿಹಾಸ ಪುಟಗಳಲ್ಲಿ" ಪುಸ್ತಕ) Archived 2013-12-08 ವೇಬ್ಯಾಕ್ ಮೆಷಿನ್ ನಲ್ಲಿ.
ಬೇಡರಕಣ್ಣಪ್ಪ ಚಿತ್ರಕ್ಕೆ ಆಯ್ಕೆ ವಿವರಗಳು - ಹೆಚ್.ಎಲ್.ಎನ್.ಸಿಂಹರವರ ಪುತ್ರ ಹೆಚ್.ಎಲ್.ಶೇಷಚಂದ್ರ ಲೇಖನ (ಕನ್ನಡಪ್ರಭ) Archived 2007-09-28 ವೇಬ್ಯಾಕ್ ಮೆಷಿನ್ ನಲ್ಲಿ.
ಡಾ ರಾಜಕುಮಾರ್ ಗಾಯನ Archived 2021-11-04 ವೇಬ್ಯಾಕ್ ಮೆಷಿನ್ ನಲ್ಲಿ.
http://members.tripod.com/~arvintripod/raj.html
http://www.rajkumarmemorial.com Archived 2013-06-15 ವೇಬ್ಯಾಕ್ ಮೆಷಿನ್ ನಲ್ಲಿ.
http://www.gandhadagudi.com/forum/viewforum.php?f=18 Archived 2007-09-28 ವೇಬ್ಯಾಕ್ ಮೆಷಿನ್ ನಲ್ಲಿ.
ಉಲ್ಲೇಖಗಳು
ಬದಲಾಯಿಸಿ
ವಿಕಿಪೀಡಿಯ
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ.
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್‌ಟಾಪ್
ವಿಕಿಪೀಡಿಯ
ವಿಕಿಪೀಡಿಯ ಅನ್ನು ಹುಡುಕಿ
[ಮರೆಮಾಡಲು]
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ.
ವೀರೇಂದ್ರ ಹೆಗ್ಗಡೆ
ಧರ್ಮಸ್ಥಳದ ಧರ್ಮಾಧಿಕಾರಿ
ಭಾಷೆ
Download PDF
ವೀಕ್ಷಿಸಿ
ಸಂಪಾದಿಸಿ
ಡಾ. ವೀರೇಂದ್ರ ಹೆಗ್ಗಡೆ ಧರ್ಮಸ್ಥಳ ಕ್ಷೇತ್ರದಲ್ಲಿರುವ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಗಳು. ಸಮಾಜ ಸೇವೆಗೆ ಇವರು ಪ್ರಸಿದ್ಧರಾಗಿದ್ದಾರೆ.
ಡಾ. ವೀರೇಂದ್ರ ಹೆಗ್ಗಡೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ, ಧಾರವಾಡ ನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭಾಷಣ ಮಾಡುತ್ತಿದ್ದಾರೆ
ಜನನ
ನವೆಂಬರ್ ೨೫, ೧೯೪೮
ಬಂಟ್ವಾಳ, ದಕ್ಷಿಣ ಕನ್ನಡ ಕರ್ನಾಟಕ
ರಾಷ್ಟ್ರೀಯತೆ
ಭಾರತೀಯ
ಇತರೆ ಹೆಸರು
ಕಾವಂದರು, ರಾಜರ್ಷಿ
ವೃತ್ತಿ
ಧರ್ಮಾಧಿಕಾರಿ
Known for
ಸಮಾಜಸೇವೆ
Title
ಡಾ.
ಸಂಗಾತಿ
ಹೇಮಾವತಿ
ಮಕ್ಕಳು
ಶ್ರದ್ಧಾ ಅಮಿತ್
ಪೋಷಕ(ರು)
ರತ್ನವರ್ಮ ಹೆಗ್ಗಡೆ, ರತ್ನಮ್ಮ ಹೆಗ್ಗಡೆ