text
stringlengths 0
2.67k
|
---|
ಉಲ್ಲೇಖಗಳು |
ಬದಲಾಯಿಸಿ |
ವಿಕಿಸೋರ್ಸ್ ನಲ್ಲಿ ಲಭ್ಯವಿರುವ ಲೇಖನದ ವಿಷಯವನ್ನು ಇಲ್ಲಿ ಅಳವಡಿಸಲಾಗಿದೆ: |
ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಐಹೊಳೆ |
Last edited ೧೮ days ago by VASANTH S.N. |
ವಿಕಿಪೀಡಿಯ |
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. |
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್‌ಟಾಪ್ |
ವಿಕಿಪೀಡಿಯ |
ವಿಕಿಪೀಡಿಯ ಅನ್ನು ಹುಡುಕಿ |
[ಮರೆಮಾಡಲು] |
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ. |
ಕಪ್ಪೆ ಅರಭಟ್ಟ |
ಭಾಷೆ |
Download PDF |
ವೀಕ್ಷಿಸಿ |
ಸಂಪಾದಿಸಿ |
ಕಪ್ಪೆ ಅರೆಭಟ್ಟ ೭ನೇ ಶತಮಾನದ ಒಬ್ಬ ಚಾಲುಕ್ಯ ಯೋಧ. ಈತನ ಬಗ್ಗೆ ಬಾದಾಮಿಯ ಒಂದು ಬಂಡೆಗಲ್ಲಿನ ಮೇಲೆ ರಚಿತವಾದ ಶಾಸನ ಐತಿಹಾಸಿಕ ಮೌಲ್ಯವನ್ನು ಹೊಂದಿದೆ. ಅರಭಟ್ಟ ಮಹಾಪುರುಷನ ಸ್ತುತಿಪರ ಪದ್ಯಗಳು ಈ ಶಾಸನದಲ್ಲಿ ದೊರೆಯುತ್ತವೆ. ಏಳನೆಯ ಶತಮಾನದ ಹಳಗನ್ನಡ ಲಿಪಿಯಲ್ಲಿ ರಚಿತವಾಗಿದೆ. ಈ ಶಾಸನ ಕಪ್ಪೆ ಅರಭಟ್ಟನ ಬಗ್ಗೆ ರಚಿತವಾಗಿರುವುದರಿಂದ ಅವನ ಹೆಸರಿನಿಂದಲೇ ಈ ಶಾಸನವನ್ನು ಗುರುತಿಸುತ್ತಾರೆ. ಈ ಶಾಸನದಲ್ಲಿ ಕನ್ನಡದ ಮೊಟ್ಟಮೂದಲ ತ್ರಿಪದಿಗಳು ದೊರೆಯುತ್ತವೆ.N[೧] |
ಕಪ್ಪೆ ಅರಭಟ್ಟನ ಶಾಸನ |
ಪರಿವಿಡಿ |
ಇತಿವೃತ್ತ |
ಬದಲಾಯಿಸಿ |
ಸುಮಾರು ಏಳನೆಯ ಶತಮಾನದ ‘ಕಪ್ಪೆ ಅರಭಟ್ಟನ ಬಾದಾಮಿಯ ಶಾಸನ’ ವು ಅನೇಕ ದೃಷ್ಟಿಗಳಿಂದ ಮಹತ್ವದ್ದಾಗಿದೆ. ಶಾಸನದ ಭಾಷೆ ಹಳಗನ್ನಡ; ಮೊದಲ ಶ್ಲೋಕ ಸಂಸ್ಕೃತದಲ್ಲಿದೆ. ಉಳಿದದ್ದು ‘ತ್ರಿಪದಿ’ಯಲ್ಲಿದೆ. ‘ಕನ್ನಡ ಛಂದಸ್ಸಿನ ತಾಯಿ ಬೇರು’ ಎನ್ನುತ್ತಾರಲ್ಲ, ಪ್ರೊ. ರಂ. ಶ್ರೀ ಮುಗಳಿ ಅವರು, ಆ ತ್ರಿಪದಿಯ ಮಟ್ಟಿನ ಮೊಟ್ಟ ಮೊದಲನೆಯ ರೂಪವು ಅದರಲ್ಲಿದೆ. ‘ಒಬ್ಬ ಕನ್ನಡ ವೀರನ ಆವೇಶಯುತವಾದ ಸ್ವಭಾವಚಿತ್ರವು ಅಲ್ಲಿದೆ. |
ಅದರಲ್ಲಿ ಭಾವ ಭಾಷೆಗಳ ಯೋಗ್ಯ ಮಿಲನವುಳ್ಳ ಸ್ವಯಂ ಪೂರ್ಣವಾದ ಭಾವಗೀತೆಯ ಸತ್ವವೂ ತುಂಬಿದೆ.’ (ನೋಡಿ, ‘ಕನ್ನಡ ಸಾಹಿತ್ಯ ಚರಿತ್ರೆ ಪುಟ 11-12). ‘ತ್ರಿಪದಿ’ಯ ಮಾತು ಬಂತು. ಅದರ ಬಗ್ಗೆ ಆಮೇಲೆ ವಿವೇಚಿಸೊಣ. ಈಗ ಬಾದಾಮಿಯ ಶಾಸನದ ಕಡೆ ತಿರುಗೋಣ.[೨] |
‘ಬಾದಾಮಿ ಶಾಸನ’ ದ ಮೂಲಪಾಠ |
ಬದಲಾಯಿಸಿ |
‘ಅಪಕೀರ್ತಿಗಿಂತ ಮರಣವೇ ಲೇಸು’ ಎಂದು ಬಗೆಯುತ್ತಿದ್ದ ಕಪ್ಪೆ ಅರಭಟ್ಟನೆಂಬ ಸಾಧುಪುರುಷನ ಕೀರ್ತಿಯನ್ನು ಕನ್ನಡದಲ್ಲಿ ತ್ರಿಪದಿಗಳಲ್ಲಿ ಹೊಗಳುವ, ವೀರಗಲ್ಲಿನ ರೂಪದ ಪ್ರಾಚೀನ ಸ್ಮಾರಕ ಈ ತಟ್ಟುಕೊಟಿ ಬಾದಾಮಿ ಶಾಸನ. ಆ ‘ಬಾದಾಮಿ ಶಾಸನ’ ಏನು? ಕಲ್ಲಿನ ಮೇಲೆ ಕೆತ್ತಿದ, ಹತ್ತು ಸಾಲಿನ ಆ ಶಾಸನದ ಮೂಲಪಾಠ, ಹೀಗಿದೆ (ಆಕರ: ಇಂಡಿಯನ್ ಆಂಟಿಕ್ವೆರಿ 10: 61; ಶಾಸನ ಪದ್ಯಮಂಜರಿ, 4, ಪುಟ 2; ‘ಕರ್ಣಾಟಕ ಪರಂಪರೆ’, ಸಂಪುಟ 1, ಪುಟ 222; 266; ‘ಬಾದಾಮಿ ಶಾಸನ’ ಚಿತ್ರಕ್ಕೆ, ಅನುಬಂಧ-2ನ್ನು ನೋಡಿ): ಕಪ್ಪೆ ಅರಭಟ್ಟನ್ ಶಿಷ್ಟಜನಪ್ರಿಯನ್ ಕಷ್ಟಜನವರ್ಜಿತನ್ ಕಲಿಯುಗ ವಿಪರೀತನ್ ವರನ್ತೇಜಸ್ವಿನೋಮೃತ್ಯುರ್ನತುಮಾನಾವಖಂಡನಂ ಮೃತ್ಯುಸ್ತತ್ಕ್ಷಣಿಕೋ ದುಃಖಮ್ಮಾನಭಂಗಂ ದಿನೇದಿನೇ ಸಾಧುಗೆ ಸಾಧು ಮಾಧುರ್ಯನ್ಗೆ ಮಾಧುರ್ಯ್ಯಂ ಬಾಧಿಪ್ಪ ಕಲಿಗೆ ಕಲಿಯುಗವಿಪರೀತನ್ಮಾಧವನೀತನ್ ಪೆರನಲ್ಲ ಒಳ್ಳಿತ್ತ ಕೆಯ್ವಾರಾರ್ಪೊಲ್ಲದುಮದರಂತೆ ಬಲ್ಲಿತ್ತು ಕಲಿಗೆ ವಿಪರೀತಾಪುರಾಕೃತಮಿಲ್ಲಿ ಸಂದಿಕ್ಕುಮದು ಬನ್ದು ಕಟ್ಟಿದ ಸಿಂಘಮನ್ಕೆಟ್ಟೊದೆನೆಮಗೆನ್ದು ಬಿಟ್ಟವೋಲ್ಕಕಲಿಗೆವಿ ಪರೀತಂಗಹಿತರ್ಕ್ಕಳ್ಕೆಟ್ಟರ್ಮ್ಮೇಣ್ಸತ್ತರವಿಚಾರಂ (ಆರನೆಯ ಸಾಲಿನಲ್ಲಿ ‘ಪೆರನಲ್ಲ’ ಮತ್ತು ಏಳನೆಯ ಸಾಲಿನಲ್ಲಿ ‘ಅದರಂತೆ’ ಎಂಬ ಕಡೆ, ಈಗಿನ ‘ರ’ ಬದಲು ಮೂಲದಲ್ಲಿ ಶಕಟರೇಫ ಇದೆ. ಲಿಪಿ ಏಳನೆಯ ಶತಮಾನದ ಕನ್ನಡದಲ್ಲಿದೆ.) |
ಶಾಸನದ ಸುಲಭ ಪಾಠ |
ಬದಲಾಯಿಸಿ |
ಈ ಶಾಸನದ ಸುಲಭಪಾಠ ಐದು ಪದ್ಯಗಳಲ್ಲಿ ಹೀಗಿದೆ: |
ಕಪ್ಪೆ ಅರಭಟ್ಟನ್ ಶಿಷ್ಟಜನಪ್ರಿಯನ್ ಕಷ್ಟಜನವರ್ಜಿತನ್ ಕಲಿಯುಗ ವಿಪರೀತನ್।।1।। |
ವರನ್ ತೇಜಸ್ವಿನೋ ಮೃತ್ಯುರ್ ನ ತು ಮಾನ-ಅವಖಂಡನಂ| |
ಮೃತ್ಯುಸ್ ತತ್ಕ್ಷಣಿಕೋ ದುಃಖಮ್ ಮಾನಭಂಗಂ ದಿನೇದಿನೇ।।2।। |
ಸಾಧುಗೆ ಸಾಧು ಮಾಧುರ್ಯನ್ಗೆ ಮಾಧುರ್ಯಂ ಬಾಧಿಪ್ಪ ಕಲಿಗೆ। |
ಕಲಿಯುಗವಿಪರೀತನ್ ಮಾಧವನ್ ಈತನ್ ಪೆರನಲ್ಲ।।3।। |
ಒಳ್ಳಿತ್ತ ಕೆಯ್ವಾರಾರ್ ಪೊಲ್ಲದುಮ್ ಅದರಂತೆ ಬಲ್ಲಿತ್ತು ಕಲಿಗೆ। |
ವಿಪರೀತಾ ಪುರಾಕೃತಮ್ ಇಲ್ಲಿ ಸಂದಿಕ್ಕುಮ್ ಅದು ಬಂದು।।4।। |
ಕಟ್ಟಿದ ಸಿಂಘಮನ್ ಕೆಟ್ಟೊದೆನ್ ಎಮಗೆಂದು ಬಿಟ್ಟವೋಲ್ ಕಲಿಗೆ। |
ವಿಪರೀತಂಗ್ ಅಹಿತರ್ಕ್ಕಳ್।।5।।[೩] |
ಶಾಸನದ ಭಾವಾರ್ಥ |
ಬದಲಾಯಿಸಿ |
ಬಾದಾಮಿ ಶಾಸನದ ಕನ್ನಡ ಹಳಗನ್ನಡವಾದರೂ, ಅದು ಬೇಗ ಅರ್ಥವಾಗದಷ್ಟು ಕಷ್ಟಪದಗಳಿಂದ ಕೂಡಿದ್ದೇನಲ್ಲ. ಆ ಪದ್ಯಗಳ ಅರ್ಥವನ್ನು ಸ್ಥೂಲವಾಗಿ ಹೀಗೆ ಹೇಳಬಹುದು: ‘ಈ ಕಪ್ಪೆ ಅರಭಟ್ಟ ಎಂಬುವನು ತನ್ನನ್ನು ಆಶ್ರಯಿಸಿದ ಎಲ್ಲ ಒಳ್ಳೆಯ ಜನರ ಪ್ರೀತಿಪಾತ್ರನು; ಕೆಟ್ಟ ಕೆಲಸ ಮಾಡುವ ತನಗೆ ಆಗದ ಜನರನ್ನು ಕೊನೆಗಾಣಿಸುವ, ಕಲಿಯುಗಕ್ಕೇ ವಿಪರೀತನೆನಿಸುವಷ್ಟು ಧೀರನು, ಇವನು! ।।1।। ‘ತೇಜಸ್ವಿಗಳಾದವರಿಗೆ ಶ್ರೇಷ್ಠವಾದುದು ಯಾವುದು? (ವೀರ)ಮರಣವೇ ಹೊರತು ಮಾನಭಂಗವಲ್ಲ ; ಏಕೆಂದರೆ, ಮೃತ್ಯು ತತ್ಕಾಲಕ್ಕೆ ಕ್ಷಣಿಕವಾದ ದುಃಖವನ್ನು ತಂದೊಡ್ಡಬಹುದು, ಆದರೆ, ಮಾನಭಂಗ? ಅದು ಅನುದಿನವೂ ದುಃಖವನ್ನು ತರುತ್ತಲೇ ಇರುತ್ತದೆ! ।।2।। ‘ಇವನು ಒಳ್ಳೆಯವರಿಗೆ ಒಳ್ಳೆಯವನು, ಸಾಧುವಾದ ಮನುಷ್ಯ; ಮಧುರವಾದ ನಡತೆಯುಳ್ಳ ಸದಾಚಾರದವನಿಗೆ ಮಾಧುರ್ಯದ ಮನುಷ್ಯ; ಬಾಧಿಸುವ ಕಲಿಗೆ (ಅಂದರೆ, ಶೂರನಿಗೆ) ಇವನು ವಿಪರೀತನಾದ ಕಲಿಯುಗ. ಇವನು ವಿಷ್ಣುವೇ ಹೊರತು ಬೇರೆಯಲ್ಲ ।।3।। ‘ಒಳ್ಳೆಯದನ್ನು ಮಾಡುವವರಿಗೂ ಕೆಡಕನ್ನು ಮಾಡುವವರಿಗೂ ಅವರವರಿಗೆ ಇವನು ಅದನ್ನೇ ಇನ್ನೂ ಹೆಚ್ಚಾಗಿ ಮಾಡುತ್ತಾನೆ. ಇವನು ಕಲಿಗೆ ವಿಪರೀತನು. ಹಿಂದಿನ ಜನ್ಮದಲ್ಲಿ ಜನರು ಏನು ಮಾಡಿದ್ದರೋ ಅವರವರ ಕರ್ಮಾನುಸಾರ ಆ ಫಲವನ್ನು ಅವರು ಇವನಿಂದ ಪಡೆಯುತ್ತಾರೆ।।4।। ‘ಕಟ್ಟಿದ ಸಿಂಹವನ್ನು ಬಿಟ್ಟರೆ ಏನು ಕೆಟ್ಟುಹೋಯ್ತು- ಎಂದು ಅದನ್ನು ಬಿಟ್ಟಂತೆ ಈಗ ಆಗಿದೆ. ಈ ಸಿಂಹಸ್ವರೂಪನಾದ, ಕಲಿಗೆ ವಿಪರೀತನಾಗಿರುವ ಇವನ ಕೈಗೆ ಸಿಕ್ಕಿ ಶತ್ರುಗಳು ಕೆಟ್ಟರು ಅಥವಾ ಸತ್ತರು. ಇದು ಅವರವರ ಅವಿಚಾರದ ಫಲ ।।5।।’ |
ವಿವರಣೆ: ಕಪ್ಪೆ ಅರೆಭಟ್ಟನು ಜನಾನುರಾಯಾಗಿ, ಜನರ ಕಷ್ಟಕಾಲದಲ್ಲಿ ನೆರವಾಗುತ್ತಿದ್ದನು. ಆಪದ್ಭಾಂದವನಂತದ್ದ ಈತ ಒಳ್ಳೆಯವರಿಗೆ ಒಳ್ಳೆಯವನಾಗಿ, ಆತ್ಮೀಯರಿಗೆ ಪ್ರೀತಿಪಾತ್ರನಾದವನಾಗಿ, ತೊಂದರೆ ಕೊಡುವವರಿಗೆ ಸಿಂಹಸ್ವಪ್ನವಾಗಿದ್ದನು. ಮಹಾಭಾರತದಲ್ಲಿ ಕೃಷ್ಣ ಹೇಗೆ ದುಷ್ಟ ಶಿಕ್ಷೆ, ಶಿಷ್ಟ ರಕ್ಷೆ ಮಾಡಿದ್ದನೋ ಆ ರೀತಿಯಲ್ಲಿ ಈತನಿದ್ದನು.[೪] [೫] |
ಉಲ್ಲೇಖ |
ಬದಲಾಯಿಸಿ |
ವಿಕಿಪೀಡಿಯ |
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. |
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್‌ಟಾಪ್ |
ವಿಕಿಪೀಡಿಯ |
ವಿಕಿಪೀಡಿಯ ಅನ್ನು ಹುಡುಕಿ |
[ಮರೆಮಾಡಲು] |
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ. |
ಚಾಲುಕ್ಯ |
ಭಾಷೆ |
Download PDF |
ವೀಕ್ಷಿಸಿ |
ಸಂಪಾದಿಸಿ |
ಚಾಲುಕ್ಯ ರಾಜವಂಶ ದಕ್ಷಿಣ ಭಾರತದಲ್ಲಿ ಕ್ರಿ.ಶ. ೫೫೦ ರಿಂದ ೭೫೦ ಮತ್ತು ಕ್ರಿ.ಶ. ೯೭೩ ರಿಂದ ೧೧೯೦ರ ವರೆಗೆ ಅಸ್ತಿತ್ವದಲ್ಲಿದ್ದ ರಾಜವಂಶ. |
ಕರ್ನಾಟಕದ ಇತಿಹಾಸ |
- |
ಕರ್ನಾಟಕದ ಹೆಸರಿನ ಮೂಲ |
ಕದಂಬ ಸಾಮ್ರಾಜ್ಯ ಮತ್ತು ಗಂಗ ಸಾಮ್ರಾಜ್ಯ |
ಚಾಲುಕ್ಯ ಸಾಮ್ರಾಜ್ಯ |
ರಾಷ್ಟ್ರಕೂಟ ಸಾಮ್ರಾಜ್ಯ |
ಕಲ್ಯಾಣಿಯ ಚಾಲುಕ್ಯ ಸಾಮ್ರಾಜ್ಯ |
ವೆಂಗಿಯ (ಪೂರ್ವ) ಚಾಲುಕ್ಯರು ಸಾಮ್ರಾಜ್ಯ |
ಹೊಯ್ಸಳ ಸಾಮ್ರಾಜ್ಯ |
ವಿಜಯನಗರ ಸಾಮ್ರಾಜ್ಯ |
ಬಹಮನಿ ಸುಲ್ತಾನರ ಆಳ್ವಿಕೆ |
ಬಿಜಾಪುರದ ಬಹಮನಿ ಸುಲ್ತಾನರ ಆಳ್ವಿಕೆ |
ಮೈಸೂರು ಸಂಸ್ಥಾನ |
ಕರ್ನಾಟಕದ ಏಕೀಕರಣ |
ವಾಸ್ತು ಶಿಲ್ಪ ಕೋಟೆಗಳು ರಾಜ ಮಹಾರಾಜರು |
This box: viewtalkedit |
ಪರಿವಿಡಿ |
ಬೆಳವಣಿಗೆ |
ಬದಲಾಯಿಸಿ |
ಚಾಲುಕ್ಯ ವಂಶದ ಸ್ಥಾಪನೆ ಕ್ರಿ.ಶ. ೫೫೦ರಲ್ಲಿ ಮೊದಲನೆಯ ಪುಲಿಕೇಶಿಯಿಂದ ನಡೆಯಿತು.ಕೆಲವು ಇತಿಹಾಸಕಾರರ ಪ್ರಕಾರ ಚಾಲುಕ್ಯ ವಂಶದ ಪ್ರಥಮ ದೊರೆ ಜಯಸಿಂಹ ಎಂದೂ ಹೇಳಲಾಗುತ್ತದೆ. ಪುಲಿಕೇಶಿ ತನ್ನ ಆಡಳಿತಕ್ಕೆ ಆಗಿನ ಕಾಲದ ವಾತಾಪಿ (ಈಗ ಬಾದಾಮಿ, ಬಾಗಲಕೋಟೆ ಜಿಲ್ಲೆಯಲ್ಲಿದೆ) ನಗರವನ್ನು ರಾಜಧಾನಿಯಾಗಿ ಮಾಡಿದ. ಆತನ ಮಕ್ಕಳು ಚಾಲುಕ್ಯ ಸಾಮ್ರಾಜ್ಯವನ್ನು ಈಗಿನ ಕರ್ನಾಟಕ, ಮಹಾರಾಷ್ಟ್ರ , ಗೋವಾ, ಆಂಧ್ರಪ್ರದೇಶ, ತೆಲಂಗಾಣ ಅಲ್ಲದೆ ಮಧ್ಯಪ್ರದೇಶ, ಗುಜರಾತ್, ತಮಿಳುನಾಡು, ಕೇರಳದ ಕೆಲಭಾಗಗಳಿಗು ವಿಸ್ತರಿಸಿದರು. |
ನರ್ತಿಸುತ್ತಿರುವ ಶಿವ - ಚಾಲುಕ್ಯ ಶಿಲ್ಪಕಲೆ |
ಪುನರುತ್ಥಾನ ಮತ್ತು ಅವಸಾನ |
ಬದಲಾಯಿಸಿ |
ಚಾಲುಕ್ಯ ಸಾಮ್ರಾಜ್ಯ ಮತ್ತೆ ಕ್ರಿ.ಶ. ೬೫೫ ರಲ್ಲಿ ಮೊದಲನೆಯ ವಿಕ್ರಮಾದಿತ್ಯನ ಮೂಲಕ ಮೇಲೆದ್ದಿತು. ಪಲ್ಲವರೊಂದಿಗಿನ ಸರಣಿ ಯುದ್ಧಗಳು ಕ್ರಿ.ಶ. ೭೪೦ ರಲ್ಲಿ ಚಾಲುಕ್ಯ ದೊರೆ ಎರಡನೇ ವಿಕ್ರಮಾದಿತ್ಯನ ವಿಜಯದೊಂದಿಗೆ ಕೊನೆಗೊಂಡವು. ಆದರೆ ಮತ್ತೆ ೭೫೦ ರಲ್ಲಿ ರಾಷ್ಟ್ರಕೂಟರ ಮೇಲೆ ಯುದ್ಧದಲ್ಲಿ ಸೋತ ನಂತರ ಆ ಕಾಲಕ್ಕೆ ಚಾಲುಕ್ಯ ಸಾಮ್ರಾಜ್ಯ ಪತನವಾಯಿತು. |
೯೭೦ ರ ದಶಕದಲ್ಲಿ ಚಾಲುಕ್ಯರ ವಂಶಜರಲ್ಲಿ ಒಬ್ಬನಾದ ಎರಡನೇ ತೈಲಪ ರಾಷ್ಟ್ರಕೂಟರನ್ನು ಸೋಲಿಸಿ ಗುಜರಾತ್ ಪ್ರದೇಶವನ್ನು ಬಿಟ್ಟು ಚಾಲುಕ್ಯ ಸಾಮ್ರಾಜ್ಯದ ಉಳಿದ ಭಾಗಗಳನ್ನೆಲ್ಲ ಹಿಂದಕ್ಕೆ ಪಡೆದನು. ಈತನ ರಾಜಧಾನಿ ಕಲ್ಯಾಣಿ, ಮತ್ತು ಈ ಕಾಲದ ಚಾಲುಕ್ಯ ವಂಶಕ್ಕೆ ಕಲ್ಯಾಣಿ ಚಾಲುಕ್ಯರು ಎಂದೂ ಸಹ ಹೆಸರು. ಈ ಬಾರಿ ಚಾಲುಕ್ಯರು ನಡುನಡುವೆ ಚೋಳ ಸಾಮ್ರಾಜ್ಯದ ವಿರುದ್ಧ ಯುದ್ಧಗಳನ್ನು ನಡೆಸುತ್ತಿದ್ದರು. ಮೊದಲನೆಯ ಸೋಮೇಶ್ವರ ಎಂಬ ಚಾಲುಕ್ಯ ಅರಸು (ಈತನಿಗೆ ಆಹವಮಲ್ಲ ಎಂದೂ ಹೆಸರು) ರಾಜಾಧಿರಾಜ ಚೋಳ ನನ್ನು ಕ್ರಿ.ಶ. ೧೦೫೨ ರಲ್ಲಿ ಸೋಲಿಸಿದನು. ಚಾಲುಕ್ಯ ವಂಶದ ಮುಂದಿನ ಪ್ರಸಿದ್ಧ ಅರಸು ಆರನೇ ವಿಕ್ರಮಾದಿತ್ಯ (ಕ್ರಿ.ಶ ೧೦೭೬-೧೧೨೬, ವಿಕ್ರಮಾಂಕ ಎಂದೂ ಹೆಸರು). |
Subsets and Splits
No saved queries yet
Save your SQL queries to embed, download, and access them later. Queries will appear here once saved.