text
stringlengths 0
2.67k
|
---|
ಈ ಯುದ್ಧದಲ್ಲಿ ಟಿಪ್ಪು ಸುಲ್ತಾನನು ರಾಕೆಟ್ಟುಗಳ ಉಪಯೋಗ ಮಾಡಿದ್ದು ಗಮನಾರ್ಹವಾಗಿತ್ತು. ಮೂರನೆಯ ಮತ್ತು ನಾಲ್ಕನೆಯ ಮೈಸೂರು ಯುದ್ಧಗಳಲ್ಲಿ ಈ ರಾಕೆಟ್ಟುಗಳ ಪರಿಣಾಮದಿಂದ ಪ್ರಭಾವಿತನಾದ ವಿಲಿಯಮ್ ಕಾಂಗ್ರೀವನು ಮುಂದೆ ಕಾಂಗ್ರೀವ್ ರಾಕೆಟ್ಟುಗಳನ್ನು ಸಂಶೋಧಿಸಿದನು. |
ಈ ಯುದ್ಧದ ಪರಿಣಾಮವಾಗಿ ಮೈಸೂರು ಬ್ರಿಟೀಷರ ವಶಕ್ಕೆ ಬಂದಿತು. ಒಡೆಯರ್ ವಂಶಕ್ಕೆ ಮರಳಿ ಅಧಿಕಾರ ದೊರೆತು, ಅವರಿಗೆ ಸಲಹಾಕಾರರಾಗಿ ಬ್ರಿಟೀಷ್ ಕಮೀಷನರು ನೇಮಿಸಲ್ಪಟ್ಟರು. ಟಿಪ್ಪುವಿನ ಎಳೆಯ ಮಗ ಮತ್ತು ಉತ್ತರಾಧಿಕಾರಿ ಫತೇ ಆಲಿಯನ್ನು ಗಡೀಪಾರು ಮಾಡಲಾಯಿತು. ಮೈಸೂರು ರಾಜ್ಯವು ಬ್ರಿಟೀಷ್ ಅಧೀನ ಸಂಸ್ಥಾನವಾಯಿತು. ಕೊಯಮತ್ತೂರು , ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಬ್ರಿಟೀಷ್ ಭಾರತದ ಭಾಗವಾದವು.[೧][೨] |
ನೋಡಿ |
ಬದಲಾಯಿಸಿ |
ಒಂದನೆಯ ಮೈಸೂರು ಯುದ್ಧ | |
ಎರಡನೆಯ ಮೈಸೂರು ಯುದ್ಧ | |
ಮೂರನೇ ಮೈಸೂರು ಯುದ್ಧ | |
ನಾಲ್ಕನೆಯ ಮೈಸೂರು ಯುದ್ಧ | |
ಟಿಪ್ಪು ಸುಲ್ತಾನ್ | |
ಲಾರ್ಡ್ ಕಾರ್ನ್‍ವಾಲಿಸ್ |
ಉಲ್ಲೇಖ |
ಬದಲಾಯಿಸಿ |
ಹಿಂದೂದೇಶದ ಚರಿತ್ರೆ ಲೇಖಕರು:ಇ.ಡಬ್ಳ್ಯು.ಥಾಂಸನ್. ಅನುವಾದಕರರು: ಕೆ.ವಿ.ದೊರೆಸ್ವಾಮಿ ಲೆಕ್ಚರರ್ ಮೈಸೂರು. |
History of India: R.C.mujumdar and Raychoudhry S.C |
Last edited ೧೧ months ago by ಸಂಗಮನಾಥ |
ವಿಕಿಪೀಡಿಯ |
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. |
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್‌ಟಾಪ್ |
ವಿಕಿಪೀಡಿಯ |
ವಿಕಿಪೀಡಿಯ ಅನ್ನು ಹುಡುಕಿ |
[ಮರೆಮಾಡಲು] |
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ. |
ನಾಲ್ವಡಿ ಕೃಷ್ಣರಾಜ ಒಡೆಯರು |
ಮೈಸೂರು ಒಡೆಯರು |
ಭಾಷೆ |
Download PDF |
ವೀಕ್ಷಿಸಿ |
ಸಂಪಾದಿಸಿ |
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು. ರಾಜಕುಮಾರನಿಗೆ ಸೂಕ್ತ ವಿದ್ಯಾಭ್ಯಾಸ, ಆಡಳಿತ ತರಬೇತಿ ಇವುಗಳನ್ನು ಮಹಾರಾಣಿಯವರು ತೀವ್ರ ನಿಗಾ ವಹಿಸಿ ನಡೆಸಿದ ಪರಿಣಾಮವಾಗಿ, ಮೈಸೂರು ರಾಜ್ಯಕ್ಕೆ ಒಬ್ಬ ಸಮರ್ಥ ಆಡಳಿತಗಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರು ದೊರಕಿದರು.[೧] |
ನಾಲ್ವಡಿ ಕೃಷ್ಣರಾಜ ಒಡೆಯರ್ |
ಮೈಸೂರು ದೊರೆಗಳು |
ಕೃಷ್ಣರಾಜ ಒಡೆಯರ್ (೧೯೦೫ರಲ್ಲಿ ಕಲಾವಿದರಾದ ಕೆ.ಕೇಶವಯ್ಯ ವಿರಚಿತ) |
ರಾಜ್ಯಭಾರ |
೧೮೯೫-೧೯೪೦ |
ಪಟ್ಟಾಭಿಷೇಕ |
01 ಫೆಬ್ರವರಿ 1895, ಮೈಸೂರು ಅರಮನೆ |
ಜನನ |
೦೪ ಜೂನ್ ೧೮೮೪ |
ಜನ್ಮ ಸ್ಥಳ |
ಮೈಸೂರು ಅರಮನೆ, ಮೈಸೂರು, ಮೈಸೂರು ರಾಜ್ಯ |
ಮರಣ |
೦೩ ಆಗಸ್ಟ್ ೧೯೪೦ (ವಯಸ್ಸು ೫೬) |
ಮರಣ ಸ್ಥಳ |
ಬೆಂಗಳೂರು ಅರಮನೆ, ಬೆಂಗಳೂರು, ಮೈಸೂರು ರಾಜ್ಯ |
ಪೂರ್ವಾಧಿಕಾರಿ |
ಹತ್ತನೇ ಚಾಮರಾಜ ಒಡೆಯರ್ (ತಂದೆ) |
ಉತ್ತರಾಧಿಕಾರಿ |
ಜಯಚಾಮರಾಜೇಂದ್ರ ಒಡೆಯರ್ |
Consort to |
ಲಕ್ಷ್ಮೀ ವಿಲಾಸ ಸನ್ನಿಧಾನ ಶ್ರೀ ಪ್ರತಾಪ ಕುಮಾರಿ ಅಮ್ಮಣ್ಣಿಯವರು |
ಅರಮನೆ |
ಒಡೆಯರ್ ಸಾಮ್ರಾಜ್ಯ |
ತಂದೆ |
ಹತ್ತನೇ ಚಾಮರಾಜ ಒಡೆಯರ್ |
ತಾಯಿ |
ಮಹಾರಾಣಿ ಕೆಂಪನಂಜಮ್ಮಣ್ಣಿ |
ಧಾರ್ಮಿಕ ನಂಬಿಕೆಗಳು |
ಹಿಂದೂ |
ನಾಲ್ವಡಿ ಕೃಷ್ಣರಾಜ ಒಡೆಯರು |
ನಾಲ್ವಡಿ ಕೃಷ್ಣರಾಜ ಒಡೆಯರು |
ಪರಿವಿಡಿ |
ಜನನ/ ಜೀವನ |
ಬದಲಾಯಿಸಿ |
ಮಹಾರಾಜ ಹತ್ತನೇ ಚಾಮರಾಜೇಂದ್ರ ಒಡೆಯರ್ ಮತ್ತು ಮಹಾರಾಣಿ ಕೆಂಪನಂಜಮ್ಮಣ್ಣಿ ವಾಣಿ ವಿಲಾಸ್ ಸನ್ನಿಧಾನ ಅವರ ಮೊದಲ ಮಗನಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ೧೮೮೪ ಜೂನ್ ೪ರಂದು ಮೈಸೂರು ಅರಮನೆಯಲ್ಲಿ ಜನಿಸಿದರು. ೧೮೯೪ರಲ್ಲಿ ಕಲ್ಕತ್ತ ಪ್ರವಾಸದಲ್ಲಿರುವ ಸಂದರ್ಭದಲ್ಲಿ ಹತ್ತನೇ ಚಾಮರಾಜೇಂದ್ರ ಒಡೆಯರ್ ಗಂಟಲು ನೋವಿನಿಂದಾಗಿ ಆಕಸ್ಮಿಕ ವಾಗಿ ಮರಣ ಹೊಂದಿದರು, ಇನ್ನೂ ಹತ್ತು ವರ್ಷ ವಯಸ್ಸಿನವರಾಗಿದ್ದ ಕೃಷ್ಣರಾಜ ಒಡೆಯರ್ ಅವರು ರಾಜ್ಯಭಾರವನ್ನು ವಹಿಸಿಕೊಳ್ಳಬೇಕಾಯಿತು. ತಾಯಿ ಮಹಾರಾಣಿ ಕೆಂಪನಂಜಮ್ಮಣ್ಣಿ ಅವರು ಕೃಷ್ಣರಾಜ ಒಡೆಯರ್ ೧೯೦೨ರಲ್ಲಿ ೧೮ ವಯಸ್ಸು ತಲುಪುವವರೆಗೆ ರಾಜ್ಯವನ್ನು ರಾಜಪ್ರತಿನಿಧಿಯಾಗಿ ಆಳಿದರು. ೧೯೦೨ ಫೆಬ್ರವರಿ ೨ರಂದು ಕೃಷ್ಣರಾಜ ಒಡೆಯರ್ ಅವರು ತಾಯಿಯಿಂದ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಅದೇ ವರ್ಷ ಆಗಸ್ಟ್ ಎಂಟರಂದು ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ನಡೆದ ಸಮಾರಂಭದಲ್ಲಿ ಆಗಿನ ಬ್ರಿಟೀಷ್ ಭಾರತದ ವೈಸ್‍ರಾಯ್ ಲಾರ್ಡ್ ಕರ್ಜನ್ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ವಿದ್ಯುಕ್ತವಾಗಿ ಮೈಸೂರಿನ ಮಹಾರಾಜರೆಂದು ಘೋಷಿಸಿದರು.[೨] |
ಮಹಾರಾಜರು ಪಿ. ರಾಘವೇಂದ್ರ ರಾವ್ ಅವರ ನಿರ್ದೇಶನದಡಿಯಲ್ಲಿ ಲೋಕರಾಜನ್ ಅರಮನೆಯಲ್ಲಿ ತನ್ನ ಆರಂಭಿಕ ಶಿಕ್ಷಣ ಮತ್ತು ತರಬೇತಿಯನ್ನು ಹೊಂದಿದರು. ಪಾಶ್ಚಿಮಾತ್ಯ ಅಧ್ಯಯನಗಳು ಜೊತೆಗೆ, ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ ಶಿಕ್ಷಣ ಪಡೆದರು. ಕುದುರೆ ಸವಾರಿ ಮತ್ತು ಭಾರತೀಯ ಮತ್ತು ಪಶ್ಚಿಮ ಶಾಸ್ತ್ರೀಯ ಸಂಗೀತವನ್ನು ಕೂಡ ಕಲಿತರು. ಮುಂದೆ ಅಜ್ಮೀರ್ ನ ಮೇಯೊ ಕಾಲೇಜ್‍ನಲ್ಲಿ ಶಿಕ್ಷಣ ಮುಂದುವರೆಸಿದರು, ಆದರೆ ಅನಾರೋಗ್ಯದ ಕಾರಣ ಮೈಸೂರಿಗೆ ಮರಳಬೇಕಾಯ್ತು. ಬಾಂಬೆ ಸಿವಿಲ್ ಸರ್ವೀಸ್‍ನ ಸರ್ ಸ್ಟುವರ್ಟ್ ಫ್ರೇಸರ್ ಅವರು ಆಡಳಿತ ನಿರ್ವಹಣೆ, ನ್ಯಾಯಶಾಸ್ತ್ರ, ತತ್ವಶಾಸ್ತ್ರ ಬಗ್ಗೆ ಶಿಕ್ಷಣವನ್ನು ನೀಡಿದರು. ಬಳಿಕ ರಾಜ್ಯದಲ್ಲಿ ಪ್ರವಾಸಗಳನ್ನು ಮಾಡುವ ಮೂಲಕ ರಾಜ್ಯದ ಅವಶ್ಯಕತೆ ಹಾಗೂ ಆಡಳಿತದ ಬಗ್ಗೆ ವ್ಯಾಪಕವಾದ ಜ್ಞಾನವನ್ನು ಪಡೆದರು. |
ಆಡಳಿತ ಸುಧಾರಣೆ |
ಬದಲಾಯಿಸಿ |
ಇವರ ಕಾಲದಲ್ಲಿ ಮೈಸೂರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಇದ್ದ 'ಪ್ರಜಾ ಪ್ರತಿನಿಧಿ ಸಭೆ'ಯು ನೂತನ ರೂಪವನ್ನು ಪಡೆದು, ನಿಜವಾದ ಜನ ಪ್ರತಿನಿಧಿ ಸಭೆಯಾಗಿ ಪರಿವರ್ತನೆಯಾಯಿತು. |
ಮೊದಲ ಸಭೆಯಲ್ಲಿ ಅವರು ಮಾತನಾಡುತ್ತಾ, " ಮೈಸೂರು ರಾಜ್ಯದ ಆಡಳಿತದಲ್ಲಿ ನಾವು ಒಂದು ಹೊಸ ಪ್ರಯೋಗವನ್ನು ಆರಂಭಿಸಿದ್ದೇವೆ. ನಮ್ಮ ಪ್ರಜೆಗಳಿಗೆ ಅಖಂಡ ಸುಖ ಸಂಪತ್ತನ್ನು ಒದಗಿಸಿ ಕೊಡಬೇಕೆಂಬುದು ನನ್ನ ಜೀವನದ ಪರಮೊದ್ದೇಶ" ಎಂದರು. ಅದಕ್ಕಾಗಿ ೧೯೨೩ರರಲ್ಲಿ ಹೊಸ , ಪ್ರಜಾ ಪ್ರತಿನಿಧಿ ಸಭೆಯನ್ನು ಶಾಸನಬದ್ದ ಸಂಸ್ಥೆಯನ್ನಾಗಿ ಮಾರ್ಪಡಿಸಿದರು. |
ಇದು ಪ್ರಜಾತಂತ್ರದ ದೃಷ್ಟಿಯಿಂದ ಭಾರತದಲ್ಲಿಯೇ ಮಾದರಿಯಾದ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಲು ಆರಂಭಿಸಿತು. ಪ್ರಜಾ ಪ್ರತಿನಿಧಿ ಸಭೆಯು ವರ್ಷಕ್ಕೆ ಎರಡು ಬಾರಿ (೧ ಜೂನ್ - ಮಹಾರಾಜರ ವರ್ಧಂತಿ, ೨ ಅಕ್ಟೋಬರ್ - ದಸರಾ ಮಹೋತ್ಸವ ) ಸಮಾವೇಶಗೊಂಡು ಕಲಾಪಗಳನ್ನು ನಡೆಸುತ್ತಿತ್ತು. |
ಅಲ್ಲಿ ವಾರ್ಷಿಕ ಆಯ-ವ್ಯಯ ಪರಿಶೀಲನೆ, ಪ್ರಶ್ನೋತ್ತರಗಳು, ಠರಾವುಗಳನ್ನು ಮಂಡಿಸುವುದು ಮುಂತಾದ ಸಂಸದೀಯ ಮಾದರಿಯ ನಡವಳಿಕೆಗಳು ನಡೆಯುತ್ತಿದ್ದವು. ಪ್ರತಿನಿಧಿ ಸಭೆಯಲ್ಲಿದ್ದ ೨೭೫ ಸದಸ್ಯರಲ್ಲಿ ಹೆಚ್ಚು ಪ್ರತಿನಿಧಿಗಳು ಜನರಿಂದ ಆಯ್ಕೆಯಾದವರಾಗಿದ್ದರು. ಕಾಲಕ್ಕೆ ತಕ್ಕ ಹಾಗೇ ಚುನಾವಣೆ ಕ್ಷೇತ್ರಗಳನ್ನು ಮರುವಿಂಗಡಣೆ ಮಾಡಿದರು. |
ನ್ಯಾಯ ವಿಧಾಯಕ ಸಭೆ |
ಬದಲಾಯಿಸಿ |
ಪ್ರಜಾ ಪ್ರತಿನಿಧಿ ಸಭೆ ಜೊತೆಗೆ ೧೯೦೭ ರಲ್ಲಿ 'ನ್ಯಾಯ ವಿಧೇಯಕ' ಸಭೆಯನ್ನೂ ಸಹ ಸ್ಥಾಪಿಸಲಾಯಿತು. ಇದರ ಸದಸ್ಯರ ಸಂಖ್ಯೆ ೫೦. ಇದರಲ್ಲಿ |
ಜನರಿಂದ ಆಯ್ಕೆಯಾದವರು ೨೨ ಸದಸ್ಯರು. ಮೇಲ್ಮನೆಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಸಂಸ್ಥೆ, ಜೂನ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಬೆಂಗಳೂರಿನಲ್ಲಿ ಸಮಾವೇಶಗೊಳ್ಳುತ್ತಿತ್ತು. |
ಪ್ರಜಾ ಪ್ರತಿನಿಧಿ ಸಭೆಯಲ್ಲಿ ಮಂಡಿಸಿದ ಎಲ್ಲ ವಿಷಯಗಳನ್ನೂ ಸಹ ವಿಮರ್ಶಿಸುವ ಅಧಿಕಾರ ಆ ಸಭೆಗೆ ಇದ್ದಿತು. ಮುಖ್ಯವಾಗಿ ಯಾವುದೇ ಕಾನೂನನ್ನು ಜಾರಿಗೊಳಿಸಲು ಆ ಸಭೆಯ ಅನುಮತಿ ಅಗತ್ಯವಾಗಿತ್ತು. ಆ ಸಭೆಗೆ ಸರ್ಕಾರದ ಖರ್ಚುಗಳನ್ನು ಕಡಿಮೆ ಮಾಡುವ ಅಧಿಕಾರ ಸಹ ಇದ್ದಿತು . |
ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ |
ಬದಲಾಯಿಸಿ |
೧೯೧೮ರಲ್ಲಿ ಸರ್ಕಾರದ ಮುಖ್ಯ ನ್ಯಾಯಾಧೀಶರಾಗಿದ್ದ ಸರ್.ಲೆಸ್ಲಿ ಮಿಲ್ಲರ್ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ರಚಿಸಿ, ಎಲ್ಲಾ ಸಮುದಾಯದ ಜನರಿಗೆ ಸರ್ಕಾರಿ ಉದ್ಯೋಗದಲ್ಲಿ ಪ್ರತಿನಿಧ್ಯ ದೊರಕುವಂತೆ ಅಧ್ಯಯನ ಮಾಡಿ, ವರದಿ ನೀಡಲು ಆದೇಶ ಮಾಡಿದರು. ನಂತರ ಆಯೋಗದ ಶಿಫಾರಸ್ಸುಗಳಂತೆ ಬ್ರಾಹ್ಮಣರು, ಆಂಗ್ಲೋ ಇಂಡಿಯನ್ನರನ್ನು ಹೊರತು ಪಡಿಸಿ ಉಳಿದ ಎಲ್ಲಾ ಜಾತಿಗಳನ್ನು ಹಿಂದೂಗಳೆಂದು ಪರಿಗಣಿಸಿ, ೧೯೨೧ರಲ್ಲಿ ಪ್ರಥಮ ಭಾರಿಗೆ ಎಲ್ಲಾ ಹಿಂದುಳಿದ ಸಮುದಾಯಗಳಿಗೆ ಶೇ.೭೫ ರಷ್ಟು ಮೀಸಲಾತಿ ನೀಡಲು ಆದೇಶ ಹೊರಡಿಸಿದರು. ಹಾಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು "ಮೀಸಲಾತಿಯ ಜನಕ" ಎನ್ನುತ್ತಾರೆ. |
"ಮಿಲ್ಲರ್ ಆಯೋಗ" ರಚನೆ ಸಾಮಾಜಿಕ ಇತಿಹಾಸದಲ್ಲೇ ಒಂದು ಮೈಲಿಗಲ್ಲಾಯಿತು. ಮಿಲ್ಲರ್ ಆಯೋಗ ಜಾರಿಗೆ ಬರಲಾಗಿ ಮೊಟ್ಟ ಮೊದಲ ಬಾರಿಗೆ ಮೈಸೂರು ಸಂಸ್ಥಾನಕ್ಕೆ ಕಾಂತರಾಜೇ ಅರಸ್ ದಿವಾನರಾಗಲು ಸಾಧ್ಯವಾಯಿತು. ಈ ಕಾಲದಲ್ಲೇ ಒಕ್ಕಲಿಗರ ಸಂಘ, ರೆಡ್ಡಿ ಜನಸಂಘ, ವೀರಶೈವರ ಜಾತಿ ಆಧಾರಿತ ಶಾಲಾ- ಕಾಲೇಜುಗಳು ಆರಂಭವಾದುವು. |
ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಎಂದರೆ, ಸ್ಥಳೀಯ ಸಂಸ್ಥೆಗಳನ್ನು ರಚಿಸಿ, ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿ ಕೊಟ್ಟುದು. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಸಹ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು. |
ಇವರ ಕಾಲದಲ್ಲಿ ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನ ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು ’ ಸಾಮಾಜಿಕ ಕಾನೂನುಗಳ ಹರಿಕಾರ’ ಎಂದು ಕರೆದಿದ್ದಾರೆ. ಸಾಹಿತ್ಯ, ಸಂಗೀತ, ವಾಸ್ತು ಶಿಲ್ಪಗಳ ಅಭಿವೃದ್ಧಿಗೆ ಪ್ರಾಮುಖ್ಯತೆಯನ್ನು ಕೊಟ್ಟು 1915 ರಲ್ಲಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರಾರಂಭಿಸಿದರು. |
ಗ್ರಾಮ ನೈರ್ಮಲೀಕರಣ |
ವೈದ್ಯ ಸಹಾಯ |
ವಿದ್ಯಾ ಪ್ರಚಾರ |
ನೀರಿನ ಸೌಕರ್ಯ |
ಪ್ರಯಾಣ ಸೌಲಭ್ಯ ಮುಂತಾದ ಕ್ಷೇತ್ರಗಳು ಸ್ವಯಂ ಆಡಳಿತ ಸಂಸ್ಥೆಗಳಾದವು. |
Subsets and Splits
No saved queries yet
Save your SQL queries to embed, download, and access them later. Queries will appear here once saved.