text
stringlengths 0
2.67k
|
---|
ಹೊಸ ರೈಲು ದಾರಿಗಳ ನಿರ್ಮಾಣ |
ಬದಲಾಯಿಸಿ |
ಮೈಸೂರು - ಅರಸೀಕೆರೆ, |
ಬೆಂಗಳೂರು - ಚಿಕ್ಕಬಳ್ಳಾಪುರ, |
ಚಿಕ್ಕಜಾಜೂರು - ಚಿತ್ರದುರ್ಗ, |
ನಂಜನಗೂಡು - ಚಾಮರಾಜನಗರ, |
ತರೀಕೆರೆ - ನರಸಿಂಹರಾಜಪುರ, |
ಶಿವಮೊಗ್ಗ ಆನಂದಪುರ [೧][ಶಾಶ್ವತವಾಗಿ ಮಡಿದ ಕೊಂಡಿ] ಈ ಎಲ್ಲ ರೈಲು ಮಾರ್ಗಗಳನ್ನು ೧೯೩೧ ರ ವೇಳೆಗೆ ಪೂರೈಸಲಾಯಿತು . |
ನೀರಾವರಿ |
ಬದಲಾಯಿಸಿ |
೧೯೦೭ರಲ್ಲಿ 'ವಾಣೀವಿಲಾಸ ಸಾಗರ'(ಮಾರಿ ಕಣಿವೆ) ಕಟ್ಟಲ್ಪಟ್ಟಿತು. ೧೯೧೧ ರಲ್ಲಿ ಆರಂಭವಾದ 'ಕೃಷ್ಣರಾಜ ಸಾಗರ' ಭಾರತದ ಮೊಟ್ಟ ಮೊದಲ ಬೃಹತ್ ಜಲಾಶಯ.[೩] ೧೯೦೦ರಲ್ಲಿಯೇ ಶಿವನ ಸಮುದ್ರದ ಬಳಿ ಕಾವೇರಿ ನದಿ ಯಿಂದ ಜಲ ವಿದ್ಯುತ್ ಕೇಂದ್ರ ಆರಂಭವಾಯಿತು. |
ಇದು ಭಾರತದ ಮೊದಲ ಜಲ ವಿದ್ಯುತ್ ಕೇಂದ್ರ. ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರದು. ಇದರ ಫಲಿತಾಂಶವಾಗಿ ೧೯೦೫ ಆಗಸ್ಟ್ ೩ ರಂದು ಪ್ರಥಮವಾಗಿ ಬೆಂಗಳೂರಿನಲ್ಲಿ ದೀಪಗಳು ಬೆಳಗಿದವು. |
ಗೆಜೆಟ್ ಪ್ರಕಟಣೆ |
ಬದಲಾಯಿಸಿ |
"ಜಾತಿ ಆಧಾರದ ಮೇಲೆ ಯಾರನ್ನೂ ಸಾರ್ವಜನಿಕ ಶಾಲೆಗಳಿಂದ ದೂರವಿಡುವ ಪರಿಪಾಠಗಳನ್ನು ಸರ್ಕಾರ ಎತ್ತಿ ಹಿಡಿಯದು. ಸಾರ್ವಜನಿಕ ಶಾಲೆಗಳನ್ನು ತೆರಿಗೆ ಆದಾಯದದಿಂದ ನಡೆಸುತ್ತಿರುವುದರಿಂದ ಶಿಕ್ಷಣವು ಸಹ, ಆಸ್ಪತ್ರೆ, ನ್ಯಾಯಾಲಯ, ರೈಲು ಪ್ರಯಾಣ ಇತ್ಯಾದಿ ಸಾರ್ವಜನಿಕ ಕ್ಷೇತ್ರಗಳಂತೆ ರಾಜ್ಯದ ಎಲ್ಲಾ ವರ್ಗದ ಜನರಿಗೂ ಲಭ್ಯವಾಗಬೇಕು". |
ಶೈಕ್ಷಣಿಕ ಕೊಡುಗೆ ಮತ್ತು ಸುಧಾರಣೆ |
ಬದಲಾಯಿಸಿ |
ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು, ಉಚಿತವಾಗಿ ಮತ್ತು ಕಡ್ಡಾಯವಾಗಿ ಆರಂಭಿಸಲಾಯಿತು. ನಾಲ್ವಡಿ ಕೃಷ್ಣರಾಜರ ಮಹತ್ತರ ಸಾಧನೆಯೆಂದರೆ ಮೈಸೂರು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದರು. |
. ದೇಶದಲ್ಲೇ ಮೊಟ್ಟಮೊದಲ ವಿಶ್ವವಿದ್ಯಾನಿಲಯವನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ೨೭೦ ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು. |
ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿತ್ತು. ಮೈಸೂರಿನ ಕ್ಷಯರೋಗ ಆಸ್ಪತ್ರೆ ಉತ್ತಮಗೊಂಡಿತು. ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗೀ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. ೧೯೦೬ ರಲ್ಲಿಯೇ ಸಹಕಾರ ಸಂಘಗಳನ್ನು ಸ್ಥಾಪಿಸಲಾಯಿತು. ರೈತರಿಗಾಗಿ ಜಮೀನು ಅಡಮಾನ ಬ್ಯಾಂಕುಗಳು ಆರಂಭವಾದವು. |
ಬುಡಕಟ್ಟು, ಗಿರಿಜನ, ಅರಣ್ಯವಾಸಿಗಳಿಗೆ ಮೊಟ್ಟ ಮೊದಲು ಶಾಲೆಗಳನ್ನು ತೆರೆಯಲಾಯಿತು. ಅಸ್ಪೃಶ್ಯರಿಗಾಗಿಯೇ ಹುಸ್ಕೂರು ಹಾಗೂ ಟಿ.ನರಸೀಪುರದಲ್ಲಿ ಶಾಲೆಗಳನ್ನು ಪ್ರಾರಂಭಿಸಲಾಯಿತು. ನಂತರ ಇವರ ಆಡಳಿತಾವಧಿಯಲ್ಲಿ ಸುಮಾರು ೮೦೦ ಶಾಲೆಗಳನ್ನು ತೆರೆಯಲಾಯಿತು. |
ಮೊಟ್ಟ ಮೊದಲ ಬಾರಿಗೆ ಸ್ತ್ರೀ ಶಿಕ್ಷಣವನ್ನು ಕಡ್ಡಾಯ ಮಾಡಲಾಯಿತು. |
೧೯೦೨ - ಬೆಂಗಳೂರಿನ ಪ್ರಥಮ ವಾಣಿಜ್ಯಶಾಲೆ ಪ್ರಾರಂಭಿಸಲಾಯಿತು. |
೧೯೦೩ - ಮೈಸೂರಿನಲ್ಲಿ ತಾಂತ್ರಿಕ ಶಾಲಾ ಸ್ಥಾಪನೆ. |
೧೯೦೬ - ಕುರುಡ ಹಾಗೂ ಮೂಕ ಮಕ್ಕಳಿಗೆ ಶಾಲೆಗಳನ್ನು ಪ್ರಾರಂಭಿಸಿದರು. |
೧೯೧೧ - ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಆರಂಭಿಸಲಾಯಿತು. |
೧೯೧೨ - ಮೊದಲ ಬಾರಿಗೆ ವಯಸ್ಕರ ಶಿಕ್ಷಣ ಆಂದೋಲನ ಪ್ರಾರಂಭಿಸಿ, ೭೦೦೦ ಸಾಕ್ಷರತಾ ಕೇಂದ್ರಗಳನ್ನು ತೆರೆದಿದ್ದರು. |
೧೯೧೬ - ಮೈಸೂರು ವಿಶ್ವವಿದ್ಯಾನಿಲಯದ ಸ್ಥಾಪನೆ. ಉರ್ದು ಶಾಲೆಗಳ ಸ್ಥಾಪನೆ. |
೧೯೧೮ - ಶಾಲಾ ಪ್ರವೇಶಕ್ಕೆ ಜಾತಿ ಪದ್ದತಿಯನ್ನು ನಿರ್ಮೂಲನೆ ಮಾಡಲಾಯಿತು. |
೧೯೧೯ - ಮಾಧ್ಯಮಿಕ ಶಾಲಾ ಮಟ್ಟದಲ್ಲಿ ಶಿಕ್ಷಣ ಶುಲ್ಕವನ್ನು ರದ್ದು ಮಾಡಿದರು. |
ಮೈಸೂರು ಘಟಿಕೋತ್ಸವದಲ್ಲಿ ಮಾಡಿದ ಭಾಷಣ |
ಬದಲಾಯಿಸಿ |
ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ವಿಶ್ವವಿದ್ಯಾನಿಲಯದ ಮೊಟ್ಟ ಮೊದಲ ಘಟಿಕೋತ್ಸವದಲ್ಲಿ - "ಶಿಕ್ಷಣವು ಕೆಲವೇ ಅದೃಷ್ಟಶಾಲಿಗಳಿಗೆ ಮಾತ್ರವಲ್ಲ. ಎಲ್ಲರಿಗೂ ಉನ್ನತ ಶಿಕ್ಷಣ ದೊರೆಯಲಿ ಎಂಬ ಕಾರಣಕ್ಕಾಗಿಯೇ ಮೈಸೂರು ವಿಶ್ವ ವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ. ಇದು ದೇಶದ ಅಸ್ಪೃಶ್ಯ, ಹಿಂದುಳಿದ, ಅಲ್ಪಸಂಖ್ಯಾತರುಗಳಿಗೆ ಅಂದರೆ ಶೇ.೮೫ ರಷ್ಟಿರುವ ಹಿಂದುಳಿದ ಎಲ್ಲಾ ಸಮುದಾಯದವರಿಗೆ ಇದೆ. ಇಲ್ಲಿನ ಬೋಧಕರು ಅವರ ತಿಳುವಳಿಕೆಯ ಮಟ್ಟಕ್ಕೆ ಇಳಿದು ತಮ್ಮ ಜ್ಞಾನವನ್ನು ಅವರೊಂದಿಗೆ ಹಂಚಿಕೊಳ್ಳಬೇಕು" ಎಂದಿದ್ದರು. |
ಜಾರಿ ಮಾಡಿದ ಸಾಮಾಜಿಕ ಕಾನೂನುಗಳು |
ಬದಲಾಯಿಸಿ |
೧೯೦೯ ರಲ್ಲಿ ದೇವದಾಸಿ ಪದ್ಧತಿ ನಿಷೇಧ |
೧೯೧೦ ರಲ್ಲಿ ಬಸವಿ ಪದ್ಧತಿ ರದ್ಧತಿ |
೧೯೧೦ ರಲ್ಲಿ ’ಗೆಜ್ಜೆಪೂಜೆ’ ಪದ್ಧತಿ ಸಂಪೂರ್ಣ ನಿರ್ಮೂಲನೆ |
೧೯೩೬ ಜುಲೈ ೧೪ ರಂದು ವೇಶ್ಯಾ ವೃತ್ತಿ ತಡೆಗಟ್ಟುವ ಕಾಯ್ದೆ ಜಾರಿ |
೧೯೩೬ ಜುಲೈ ೭ ರಂದು ವಿಧವೆಯರಿಗೆ ಮರು ವಿವಾಹ ಮಾಡಿಕೊಳ್ಳುವ ಕಾಯ್ದೆಯ ಜಾರಿ |
೧೯೩೬ ಜುಲೈ ೭ ರಂದು ಸ್ತ್ರೀಯರಿಗೆ ಕಡ್ಡಾಯ ಶಿಕ್ಷಣ ಜಾರಿ |
೧೯೧೪ ರಲ್ಲಿ ಶಾಲಾ ಪ್ರವೇಶಕ್ಕೆ ಜಾತಿ ಪರಿಗಣನೆಯ ನಿಷೇಧ |
೧೯೧೯ ರಲ್ಲಿ ಮಾಧ್ಯಮಿಕ ಶಾಲಾ ಮಟ್ಟದಲ್ಲಿ ಶಿಕ್ಷಣ ಶುಲ್ಕ ರದ್ಧತಿ |
೧೯೨೭ ರಲ್ಲಿ ಸ್ತ್ರೀಯರಿಗೆ ಮತದಾನದ ಹಕ್ಕನ್ನು ಮೊಟ್ಟ ಮೊದಲ ಬಾರಿಗೆ ಕಲ್ಪಿಸಿಕೊಟ್ಟರು |
೧೯೦೫ ರಲ್ಲಿ ಸಹಕಾರಿ ಕಾರ್ಮಿಕ ಪರಿಹಾರ ಕಾಯ್ದೆಯನ್ನು ಜಾರಿಗೆ ತಂದರು |
೧೯೧೩ ರಲ್ಲಿ ಮೈಸೂರು ಗ್ರಾಮ ನ್ಯಾಯಾಲಯ ಕಾಯ್ದೆಯನ್ನು ಜಾರಿ ಮಾಡಿದರು |
೧೯೧೮ ರಲ್ಲಿ ಗ್ರಾಮ ಪಂಚಾಯ್ತಿಗಳ ಕಾಯ್ದೆಯನ್ನು ಜಾರಿಗೆ ತಂದರು |
ಆರ್ಥಿಕ ಸುಧಾರಣೆಗಳು |
ಬದಲಾಯಿಸಿ |
ಭಾರತದ ಆರ್ಥಿಕತೆಯ ಬೆನ್ನೆಲುಬು ಕೃಷಿ ಎಂದು ಅರಿತಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ರೈತರಿಗೆ ಸುಲಭವಾಗಿ ಸಾಲ ದೊರೆಯುವಂತೆ ಅನುಕೂಲವಾಗಲು ೧೯೦೫ರಲ್ಲಿ ಸಹಕಾರಿ ಸೊಸೈಟಿಗಳನ್ನು ಜಾರಿಗೆ ತಂದರು. ಆ ಮೂಲಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕು ಮತ್ತು ಭೂ ಅಭಿವೃದ್ದಿ ಬ್ಯಾಂಕ್‍ಗಳು ಪ್ರಾರಂಭಗೊಂಡವು. |
ಮಂಡ್ಯ ಮತ್ತು ಮೈಸೂರು ಪ್ರಾಂತ್ಯದ ರೈತರ ಒಣಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ನಾಲ್ವಡಿ ಕೃಷ್ಣರಾಜ ಒಡೆಯರ್ ಕಾವೇರಿ ನದಿಗೆ ಅಡ್ಡಲಾಗಿ ಕೃಷ್ಣರಾಜ ಸಾಗರ ಅಣೆಕಟ್ಟನ್ನು ಕಟ್ಟಿಸಿ, ೧,೨೦,೦೦೦ ಎಕರೆ ಜಮೀನಿಗೆ ನೀರಾವರಿ ಕಲ್ಪಿಸಿದರು. |
ಸ್ಥಳೀಯ ಆಡಳಿತಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ೧೯೧೮ ರಲ್ಲಿ ಗ್ರಾಮ ಪಂಚಾಯ್ತಿಗಳ ಕಾಯ್ದೆಯನ್ನು ಜಾರಿಗೆ ತರಲಾಯಿತು. |
ಗ್ರಾಮೀಣ ಜನರಿಗೆ ಶೀಘ್ರ ನ್ಯಾಯ ಒದಗಿಸಲು ಅವರಿಗೆ ೧೯೧೩ರಲ್ಲಿ 'ದಿ ಮೈಸೂರು ವಿಲೇಜ್ ಕೋರ್ಟ್ ಆಕ್ಟ್' ನ್ನು ಜಾರಿಗೆ ತಂದರು. |
ರೈತರು ಸಾಲದ ಅಡಿಯಲ್ಲಿ ಸಿಕ್ಕಿ ಭೂಮಿಯನ್ನು ಕಳೆದುಕೊಳ್ಳುವ ಸ್ಥಿತಿ ತಲುಪಿದಾಗ ನಾಲ್ವಡಿ ಕೃಷ್ಣರಾಜ ಒಡೆಯರ್ ೧೯೨೮ರಲ್ಲಿ 'ಅಗ್ರಿಕಲ್ಚರಿಸ್ಸ್ ಡಿಬೆಟ್ ರಿಲೀಫ್ ಆಕ್ಟ್" ನ್ನು ಜಾರಿ ಗೊಳಿಸಿದರು. |
ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಲ್ಲುತ್ತದೆ. ೧೯೦೨ ರಲ್ಲಿ ಕಾವೇರಿ ನದಿಗೆ ಶಿವನ ಸಮುದ್ರದಲ್ಲಿ ಜಲವಿದ್ಯುತ್ ಕಾರ್ಯಾಗಾರ ಸ್ಥಾಪನೆಯಾಯಿತು. ಜೊತೆಗೆ ಪ್ರಥಮ ಬಾರಿಗೆ ವಿದ್ಯುತ್‍ನ್ನು ಕೋಲಾರದ ಗಣಿ ಪ್ರದೇಶಕ್ಕೆ ವರ್ಗಾಯಿಸಲಾಯಿತು. |
೧೯೩೯ರ ಫೆಬ್ರವರಿ ೫ರಂದು ಜೋಗ ಜಲಪಾತದ ಬಳಿ ಶರಾವತಿ ನೀರಿನಿಂದ ವಿದ್ಯುತ್ ಉತ್ಪಾದನೆ ಮಾಡಲು ಯೋಜನೆ ರೂಪಿಸಲಾಯಿತು. |
ಕೈಗಾರಿಕ ಅಭಿವೃದ್ದಿಗಳು |
ಬದಲಾಯಿಸಿ |
೧೯೧೪ರಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ ಸ್ಕೂಲನ್ನು ಆರಂಭಿಸಿದರು. ಈ ಸಂದರ್ಭದಲ್ಲಿ ಆರಂಭಗೊಂಡ ಕೈಗಾರಿಕೆಗಳೆಂದರೆ- |
ಭದ್ರಾವತಿಯ ಮೈಸೂರು ಕಬ್ಬಿಣದ ಕಾರ್ಖಾನೆ |
ಬೆಂಗಳೂರಿನ ಸಾಬೂನು ಕಾರ್ಖಾನೆ |
ಮೈಸೂರಿನ ಗಂಧದೆಣ್ಣೆ ಕಾರ್ಖಾನೆ |
ಸಿಮೆಂಟ್ ಕಾರ್ಖಾನೆ |
೧೯೩೪ - ಮಂಡ್ಯದಲ್ಲಿ ಮೈಸೂರು ಸಕ್ಕರೆ ಕಂಪೆನಿ ಪ್ರಾರಂಭ |
೧೯೩೬ - ಮೊಟ್ಟ ಮೊದಲ ಮೈಸೂರು ಪೇಪರ್ ಮಿಲ್ ಆರಂಭ |
ಮಂಗಳೂರು ಹೆಂಚು ಕಾರ್ಖಾನೆ |
ಷಹಬಾದಿನ ಸಿಮೆಂಟ್ ಕಾರ್ಖಾನೆ |
ಮೈಸೂರಿನ ಅರಗು ಮತ್ತು ಬಣ್ಣದ ಕಾರ್ಖಾನೆ |
ಕೊಡಗಿನ ಕಾಫಿ ಸಂಶೋಧನಾ ಕೇಂದ್ರಗಳು ಪ್ರಾರಂಭಗೊಂಡವು. |
ರಸ್ತೆ ಸಾರಿಗೆ |
ಬದಲಾಯಿಸಿ |
ಬೆಂಗಳೂರು-೨೧೫ ಮೈಲಿ |
ಕೋಲಾರ -೨೧೧ ಮೈಲಿ |
ತುಮಕೂರು -೧೮೯ ಮೈಲಿ |
ಚಿತ್ರದುರ್ಗ - ೨೨೦ ಮೈಲಿ |
ಮೈಸೂರು -೩೬೮ ಮೈಲಿ |
ಹಾಸನ - ೧೯೧ ಮೈಲಿ |
ಶಿವಮೊಗ್ಗ - ೨೮೩ ಮೈಲಿ |
ಕಡೂರು - ೩೨೫ ಮೈಲಿ |
ರೈಲು ಸಾರಿಗೆ |
ಬದಲಾಯಿಸಿ |
೧೯೧೩ ರಲ್ಲಿ ಹೊಸ ರೈಲು ಸಾರಿಗೆ ನಿರ್ಮಾಣ ಇಲಾಖೆ ಆರಂಭವಾಯಿತು.[೪] |
೧೯೧೮ ರಲ್ಲಿ ಚಿಕ್ಕಬಳ್ಳಾಪುರ-ಯಲಹಂಕ-ಮೈಸೂರು-ಅರಸೀಕೆರೆ ಮೀಟರ್ ಗೇಜ್ ರೈಲು ಮಾರ್ಗ ನಿರ್ಮಾಣವಾಯಿತು. |
೧೯೨೧ ರಲ್ಲಿ ಚಿಕ್ಕ ಜಾಜೂರು-ಚಿತ್ರದುರ್ಗ ಮೀಟರ್ ಗೇಜ್ ರೈಲು ಮಾರ್ಗ ನಿರ್ಮಾಣ ವಾಯಿತು. |
ಮೈಸೂರು ಸಂಸ್ಥಾನದ ಬಗೆಗಿನ ಮೆಚ್ಚುಗೆಯ ನುಡಿಗಳು |
ಬದಲಾಯಿಸಿ |
ಡಿ.ವಿ.ಜಿಯವರ ಮಾತು- "ನನ್ನ ತಿಳುವಳಿಕೆಯಲ್ಲಿ ೧೮೮೧ ರಿಂದ ೧೯೪೦ರ ಅವಧಿಯ ವರ್ಷಗಳು ಮೈಸೂರಿನ ಸುವರ್ಣ ಯುಗ" ಎಂದು ಹೇಳಿದರೆ ಉತ್ಪ್ರೇಕ್ಷೆಯಾಗಲಾರದು. |
ಇಂಗ್ಲೆಂಡಿನ ಗ್ರಾಫಿಕ್ ಪತ್ರಿಕೆ- ಮಾದರಿ ಸಂಸ್ಥಾನ ಎಂಬ ಹೆಮ್ಮೆಯ ಹೆಸರಿಗೆ ಮತ್ತ್ಯಾವ ಭಾರತೀಯ ಸಂಸ್ಥಾನಕ್ಕೂ ಆ ಅರ್ಹತೆ ಇಲ್ಲ. ನ ಪಡಪಡಪಢಪಢ ಹಾಸನಹಾಸನ ಖ್ಠಿಞ್ಝ ಉಜ್ಟ್ಚಿ ಛಿಜ (ಮಾರ್ಚ್-೧೦,೧೯೦೬) |
ಎನ್‍ಸೈಕ್ಲೋಪಿಡಿಯಾ ಬ್ರಿಟಾನಿಕಾದ ಬೃಹತ್ ಕೃತಿಯಲ್ಲಿ-ಭಾರತ ಖಂಡದಲ್ಲಿ ಅತ್ಯಂತ ಹೆಚ್ಚಿನ ಪ್ರಗತಿಯನ್ನು ಮುಂದುವರೆಸುತ್ತಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ನ್ಯಾಯವಾದ ಅರ್ಹತೆಯನ್ನು ಪಡೆದಿರುವ ಮೈಸೂರು ಮಾದರಿ ಸಂಸ್ಥಾನವಾಗಿದೆ-೧೯೩೮ |
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಂತಿಮ ಯಾತ್ರೆ |
ಬದಲಾಯಿಸಿ |
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ೩೮ ವರ್ಷಗಳ ಕಾಲ ದಕ್ಷ ಆಡಳಿತ ನಡೆಸಿ ಪ್ರಜೆಗಳಿಂದ "ರಾಜರ್ಷಿ" ಬಿರುದು ಪಡೆದರು. ತಮ್ಮ ಸಂಸ್ಥಾನದ ಏಳಿಗೆಗಾಗಿ, ತಮ್ಮ ಪ್ರಜೆಗಳ ನೆಮ್ಮದಿ ಬದುಕಿಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟರು. ಸಾಮಾಜಿಕ ಪರಿವರ್ತನೆಯ ರೂವಾರಿಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆಗಸ್ಟ್ ೩, ೧೯೪೦ರಲ್ಲಿ ತಮ್ಮ ಇಹಲೋಕದ ಯಾತ್ರೆ ಮುಗಿಸಿದರು.[೫] |
ನಾಲ್ವಡಿ ಕೃಷ್ಣರಾಜ ಒಡೆಯರು ಹಾಗು ಅವರ ತಂದೆ ೯ನೇ ಚಾಮರಾಜ ಒಡೆಯರು ಹಾಗು ಸಹೋದರರು |
Subsets and Splits
No saved queries yet
Save your SQL queries to embed, download, and access them later. Queries will appear here once saved.